ಮನರೇಗಾ: ಮೂರು ತಿಂಗಳ ಸ್ತ್ರೀ ಚೇತನ ಅಭಿಯಾನ

ಮನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಹೊಸಕೋಟೆ ತಾಲ್ಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳು ರವರೆಗೆ ‘ಸ್ತ್ರೀ ಚೇತನ ಅಭಿಯಾನ’ ಆಯೋಜಿಸಲಾಗಿದೆ.

ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ನೋಂದಾಯಿಸಿಕೊಂಡ ಮಹಿಳಾ ಕೂಲಿಕಾರರಲ್ಲಿ ಶೇ.52 ರಷ್ಟು ಭಾಗವಹಿಸುತ್ತಿದ್ದು, ಹಲವು ಜಾಗೃತಿ ಕೈಗೊಂಡಿದ್ದರೂ ಶೇ.55 ರಷ್ಟು ತಲುಪಲು ಸಾಧ್ಯವಾಗಿಲ್ಲ. ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು 3 ತಿಂಗಳ ಕಾಲ ಸ್ತ್ರೀ-ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಉಪ ಎಂದು ಜಿ.ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್ ತಿಳಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಪೂರೈಸಿರುವ ಮಹಿಳೆಯರಿಗೆ ಹೊಸಕೋಟೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಾರಾಯಣ ಸ್ವಾಮಿ ರವರು ಸನ್ಮಾನ ಮಾಡಿದರು.

*ವಿವಿಧ ಜಾಗೃತಿ ಕಾರ್ಯಕ್ರಮಗಳು*

* ರಂಗೋಲಿ ಸ್ವರ್ಧೆ
* ವೈಯಕ್ತಿಕ ಕಾಮಗಾರಿಗಳ ಅರಿವು ಮತ್ತು ಫಲಾನುಭವಿಗಳಗೆ ಆದೇಶ ಪತ್ರ ವಿತರಣೆ
* ಮಹಿಳಾ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಕ್ರೀಡಾ ಕೂಟ ಅಯೋಜನೆ
* ಅರೋಗ್ಯ ತಪಾಸಣಾ ಶಿಬಿರ

ಈ ಎಲ್ಲ ಕಾರ್ಯಕ್ರಮಗಳಿಂದ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10 ರಷ್ಟು ಹೆಚ್ಚಿಸುವುದು ಹಾಗೂ ಮಹಿಳಾ ಕಾಯಕ ಬಂಧುವಿಗೆ ಪ್ರೋತ್ಸಾಹಧನ ಕಡ್ಡಾಯವಾಗಿ ಪಾವತಿಸುವ ಉದ್ದೇಶ ಹೊಂದಲಾಗಿದೆ. ಅರ್ಹ ಮಹಿಳಾ ಕೂಲಿಕಾರರಿಗೆ ಜಾಗೃತಿ ಮೂಡಿಸುವುದು, ಮೂರು ತಿಂಗಳ ಕಾಲ ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧತೆ ಮಾಡಿ ಕೊಳ್ಳುವುದು , ಗ್ರಾಪಂ ಮಟ್ಟದ ಚುನಾಯಿತ ಸದಸ್ಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆಹ್ವಾನಿಸಬೇಕು. ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿಶೇಷ ಪ್ರಯತ್ನಗಳನ್ನು ನಡೆಸುವ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಭಿಯಂತರರು, ಗ್ರಾಮ ಕಾಯಕ ಮಿತ್ರರಿಗೆ ಹಾಗೂ ಸಿಬ್ಬಂದಿಗೆ ಸನ್ಮಾನಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅರ್ಹ ಪಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, MVJ ಮೆಡಿಕಲ್ ಕಾಲೇಜಿನ ವೈದ್ಯರು, ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯ ಕರ್ತೆಯರು ಹಾಗೂ ನರೇಗಾ ಕೂಲಿ ಕಾರರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ವರ್ಗದವರು ಭಾಗವಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *