Categories: ಲೇಖನ

ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ…? ಹೇಗೆ ಮನಸ್ಸನ್ನು ವಿಶಾಲ ಮಾಡಿಕೊಳ್ಳುವುದು…?

ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ………

ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ?

ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ?

ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ?

ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ?

ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ?

ಧರ್ಮ, ಜಾತಿ, ಭಾಷೆ, ಹಣಕಾಸು, ಪಕ್ಷ, ಸಂಪ್ರದಾಯ, ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ ಮನಸ್ಸಿಗೆ ತುಮಲವಾಗುತ್ತಿದೆಯೇ ?

ಕೆಲವು ವಿಷಯಗಳ ಬಗ್ಗೆ ಬೇಗ ಕೋಪ ಬಂದು ಪ್ರತಿಕ್ರಿಯಿಸಿ ವಿರೋಧಿಗಳ ಸದ್ದಡಗಿಸಬೇಕು ಎಂಬ ಅಭಿಪ್ರಾಯ ಉಂಟಾಗಿ ಬಿಪಿ ಏರಿಕೆಯಾಗುತ್ತದೆಯೇ ?????????

ಈ ರೀತಿಯ ಕೆಲವು ಅಥವಾ ಎಲ್ಲವೂ ನಿಮ್ಮಲ್ಲಿ ಉಂಟಾಗುತ್ತಿದ್ದರೆ ಅದನ್ನು ನಿಯಂತ್ರಿಸಿಕೊಳ್ಳಲು ಕೆಲವು ಸಲಹೆ ರೂಪದ ಕಿವಿಮಾತುಗಳು ನಿಮಗಾಗಿ……..

ನಿಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಂಡರೆ ಖಂಡಿತವಾಗಿ ಈ ಸಮಸ್ಯೆಗಳಿಗೆ ಸಹಜ, ಸ್ವಾಭಾವಿಕವಾಗಿ ಪರಿಹಾರ ಕಂಡುಕೊಳ್ಳಬಹುದು ಮತ್ತು ನೆಮ್ಮದಿಯಿಂದ ಬದುಕಿನ ಸಾರ್ಥಕತೆಯತ್ತ ಹೆಜ್ಜೆ ಹಾಕಬಹುದು……

ಹೇಗೆ ಮನಸ್ಸನ್ನು ವಿಶಾಲ ಮಾಡಿಕೊಳ್ಳುವುದು ????

1) ನಮ್ಮ ಮೂಲ ನಿಷ್ಠೆಯನ್ನು ಪ್ರಕೃತಿಗೆ ವರ್ಗಾಯಿಸುವುದು……..

ನಮ್ಮನ್ನು ಹುಟ್ಟಿಸಿರುವ ಅಪ್ಪ ಅಮ್ಮ, ನಾವು ಹುಟ್ಟಿಸುವ ಮಕ್ಕಳು ಸೇರಿ ಎಲ್ಲಾ ಸಂಬಂಧಗಳು ಒಂದು ಸಾಮಾಜಿಕ ವ್ಯವಸ್ಥೆಯ ಭಾಗವೇ ಹೊರತು ಅದೇ ಅಂತಿಮವಲ್ಲ. ನಾವು ಸೃಷ್ಟಿಯ ಪ್ರತ್ಯೇಕ ಜೀವಿ. ನಮ್ಮ ಅಸ್ತಿತ್ವ ಸ್ವತಂತ್ರ. ಹುಟ್ಟಿಗೆ ಗಂಡು ಹೆಣ್ಣು ಒಂದು ಮಾರ್ಗ. ಅವರನ್ನು ವ್ಯಾವಹಾರಿಕ ಗುರುತಿಗಾಗಿ ತಂದೆ ತಾಯಿ, ಮಗ ಮಗಳು ಮುಂತಾದ ಹೆಸರಿನಿಂದ ಕರೆಯಲಾಗುತ್ತದೆ. ಅದರ ಅರ್ಥ ನಾವು ಈ ಯಾವ ಸಂಬಂಧಗಳ ನಿಯಂತ್ರಣಕ್ಕೆ ಒಳಪಡಬಾರದು ಅಥವಾ ಒಳಪಡಿಸಬಾರದು. ಪರಸ್ಪರ ಪ್ರೀತಿ, ವಿಶ್ವಾಸ, ಸಹಕಾರ ಇರಬೇಕೆ ಹೊರತು ಹೆಚ್ಚಿನ ನಿರೀಕ್ಷೆ, ನಿಯಂತ್ರಣ ನಮ್ಮ ದುಃಖ ಹೆಚ್ಚಿಸುತ್ತದೆ. ಅಪ್ಪ, ಮಗ, ಮಗಳು ನಮ್ಮ ವಿರುದ್ಧ ಅಭಿಪ್ರಾಯ ಅಥವಾ ನಡವಳಿಕೆ ಪ್ರದರ್ಶಿಸಿದರೆ ಅದನ್ನು ಸಹಜವಾಗಿ ಸ್ವೀಕರಿಸಿ ಮುಂದೆ ಹೋಗಬೇಕು. ಅವರು ನಮ್ಮವರು ನಮ್ಮ ವಿರುದ್ಧವಿದ್ದಾರೆ ಎಂದು ಕೊರಗುತ್ತಾ ಇರಬಾರದು. ನಾವು ಇರುವುದು ನಮಗಾಗಿ ಮಾತ್ರ.

2) ಹುಟ್ಟಿದ ತಕ್ಷಣ ನಮ್ಮ ಮೇಲೆ ನಮ್ಮ ಧರ್ಮ, ಜಾತಿ, ಭಾಷೆ, ವಂಶ ಎಲ್ಲವೂ ಹೇರಲ್ಪಡುತ್ತದೆ. ಇದು ಸ್ವಾಭಾವಿಕವಲ್ಲ…………

ಸಮಾಜ ಮತ್ತು ಆಡಳಿತದ ಅನುಕೂಲಕ್ಕಾಗಿ ರೂಪಿತವಾದ ನೀತಿ ನಿಯಮಗಳು. ಇವುಗಳ ಅರಿವು ಇರಬೇಕು. ಆದರೆ ಅದೇ ಶ್ರೇಷ್ಠ, ಅದೇ ಅಂತಿಮ, ಅದನ್ನು ಉಳಿಸುವುದೇ ನಮ್ಮ ಕರ್ತವ್ಯ ಮುಂತಾದ ಭ್ರಮೆಗೆ ಒಳಗಾಗಬಾರದು. ಅದೊಂದು ಅವಶ್ಯ ಮತ್ತು ಅನಿವಾರ್ಯ ಅಂಶಗಳೇ ಹೊರತು ನಾವು ಅಲ್ಲಿ ಹುಟ್ಟಿದ ಮಾತ್ರಕ್ಕೆ ಅವೆಲ್ಲವೂ ಶ್ರೇಷ್ಠ ಎಂದು ಭಾವಿಸಬಾರದು. ಆಗ ಇದರಿಂದ ಇತರರು ನಮ್ಮಂತೆ ಎಂಬ ಸಹಕಾರ ಭಾವ ಮೂಡುತ್ತದೆ. ದ್ವೇಷದ ಭಾವ ಕಡಿಮೆಯಾಗುತ್ತದೆ.

3) ಇದು ಅತಿಮುಖ್ಯವಾದುದು.
ನಾವು ನಮ್ಮ ಅರಿವಿನ – ಜ್ಞಾನದ – ತಿಳಿವಳಿಕೆಯ ಮೂಲವನ್ನು ಸ್ಪಷ್ಟವಾಗಿ ಮತ್ತು ವೈಯಕ್ತಿಕವಾಗಿ ಗುರುತಿಸಬೇಕು……….

ಅಂದರೆ ನಮ್ಮ ತಿಳಿವಳಿಕೆಯ ಮೇಲೆ ಹೆಚ್ಚು ಪ್ರಭಾವ ಬೀರಿರುವುದು ಯಾವುದು ಎಂದು ಗಮನಿಸಬೇಕು. ತಂದೆ, ತಾಯಿ, ತಾತಾ, ಅಜ್ಜಿ, ಮಾವ, ದೊಡ್ಡಪ್ಪ, ಅಣ್ಣ, ಅಕ್ಕ ಮುಂತಾದ ಸಂಬಂದಗಳೇ,
ಅಥವಾ ಶಾಲೆ ಮತ್ತು ಅಲ್ಲಿನ ಉಪಾಧ್ಯಾಯರು, ಅವರಲ್ಲಿ ಒಬ್ಬರು ಅಥವಾ ಎಲ್ಲರೂ ಆಗಿರಬಹುದು ಅಥವಾ ಬೀದಿಯ – ಊರಿನ ಆಕರ್ಷಕ ವ್ಯಕ್ತಿತ್ವದ ನಾಯಕ ಯಾರಾದರೂ ಆಗಿರಬಹುದು ಅಥವಾ ಪೌರಾಣಿಕದ, ಇತಿಹಾಸದ, ವರ್ತಮಾನದ ರಾಜಕೀಯ, ಸಾಮಾಜಿಕ ಧಾರ್ಮಿಕ, ಸಿನಿಮಾ, ಸಾಹಿತ್ಯ, ಸಂಗೀತ ಅಥವಾ ಇತರೆ ಯಾರಾದರೂ ಆಗಿರಬಹುದು ಅಥವಾ ನೀವು ಹುಟ್ಟಿದ, ಓದಿದ ಯಾವುದಾದರೂ ಧರ್ಮ ಅಥವಾ ಧರ್ಮ ಗ್ರಂಥಗಳಾಗಿರಬಹುದು ಅಥವಾ ಬುದ್ಧ, ಬಸವ ವಿವೇಕಾನಂದ, ಆಚಾರತ್ರಯರು, ಗಾಂಧಿ, ಅಂಬೇಡ್ಕರ್ ರೀತಿಯ ಯಾರಾದರೂ ಆಗಿರಬಹುದು ಅಥವಾ ನೀವು ಬೆಳೆದ ಅಥವಾ ನೋಡಿದ ಪರಿಸರವೇ ಆಗಿರಬಹುದು. ಇದರಲ್ಲಿ ಒಂದು ಅಥವಾ ಎಲ್ಲವೂ ಆಗಿರಬಹುದು. ಇದನ್ನು ನಾವು ಮನನ ಮಾಡಿಕೊಂಡರೆ ನಮಗೆ ಯೋಚಿಸುವ ದಿಕ್ಕು ಸುಲಭವಾಗಿ ಸಿಗುತ್ತದೆ. ಹೇಗೆಂದರೆ ನಾವು ಯೋಚಿಸುವುದು ಒಂದು ಮೂಲವಾದರೆ ಅದರ ಇನ್ನಷ್ಟು ಮೂಲಗಳು ಇವೆ ಎಂದು ಅರ್ಥಮಾಡಿಕೊಳ್ಳಬಹುದು. ಇದರಿಂದಾಗಿ ಮನಸ್ಸನ್ನು ವಿಶಾಲ ಗೊಳಿಸಿಕೊಳ್ಳಲು ತುಂಬಾ ತುಂಬಾ ಸಹಾಯವಾಗುತ್ತದೆ.

4) ಈ ಎಲ್ಲದರ ನಡುವೆ ವ್ಯಾವಹಾರಿಕ ಜಗತ್ತಿನ ಅನಿವಾರ್ಯತೆಯನ್ನು ಮರೆಯಬಾರದು………..

ಅದು ಸರಿಯಾಗಿ ಇಲ್ಲದಿದ್ದರೆ ಮೇಲೆ ಹೇಳಿದ ವಿಷಯಗಳು ವಾಸ್ತವದಲ್ಲಿ ವಿಫಲವಾಗುವ ಸಾಧ್ಯತೆಯೇ ಹೆಚ್ಚು. ಬದಲಾವಣೆಗಳನ್ನು ಸ್ವೀಕರಿಸುತ್ತಾ, ನಮ್ಮ ಅನುಕೂಲಕ್ಕೆ ತಕ್ಕಂತೆ ಅದನ್ನು ಹೊಂದಿಸಿಕೊಳ್ಳುತ್ತಾ ಅದರಲ್ಲಿ ನಿರಂತರತೆಯನ್ನು ಕಾಪಾಡಬೇಕು. ಮುಖ್ಯವಾಗಿ ಫಾಸ್ಟ್ ಫುಡ್ ಸಂಸ್ಕೃತಿಯನ್ನು ಆದಷ್ಟೂ ತಿರಸ್ಕರಿಸಬೇಕು. ಇಂದಿನ ನಮ್ಮ ಬಹುತೇಕ ಅಸಹನೆ ಅತೃಪ್ತಿಗೆ ಇದೇ ಬಹುಮುಖ್ಯ ಕಾರಣವಾಗಿದೆ. ಒಮ್ಮೆ ಇದನ್ನು ನಿಯಂತ್ರಿಸಿ ಸಾಧ್ಯವಾದಷ್ಟು ತಾಳ್ಮೆಗೆ ಶರಣಾದರೆ ಮನಸ್ಸು ನಿರ್ಮಲತೆಯತ್ತ ಸಾಗುತ್ತದೆ. ಆಗ ಸಹಜವಾಗಿ ಒತ್ತಡ ಕಡಿಮೆಯಾಗಿ ಮನಸ್ಸು ವಿಶಾಲವಾಗುತ್ತದೆ.

5) ಈ ಎಲ್ಲವನ್ನೂ ಸಾಧ್ಯವಾಗಿಸಲು ನಿಮ್ಮ ದೈಹಿಕ ಆರೋಗ್ಯ ಬಹುಮುಖ್ಯ……..

ಅದಿಲ್ಲದೇ ಯಾವುದನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅದನ್ನು ನಮ್ಮ ನಮ್ಮ ಅವಕಾಶ ಮತ್ತು ಮಿತಿಯಲ್ಲಿ ಕಡ್ಡಾಯವಾಗಿ ಸೈನಿಕ ಶಿಸ್ತು ರೂಪಿಸಿಕೊಳ್ಳಲು ಪ್ರಯತ್ನಿಸಲೇಬೇಕು. ಏಕೆಂದರೆ ಬಹುತೇಕ ದುರ್ಬಲ ಆರೋಗ್ಯದ ಜನರು ಹೆಚ್ಚು ಉದ್ವೇಗ ಮತ್ತು ನಿರಾಸೆಗೆ ಒಳಗಾಗುತ್ತಾರೆ. ಮನಸ್ಸಿನ ನಿಯಂತ್ರಣ ಕಳೆದುಕೊಂಡು ಇತರರನ್ನು ದೂಷಿಸುತಾರೆ. ಮನಸ್ಸಿನ ವಿಶಾಲತೆಗೆ ಇದು ಅಡ್ಡಿಯಾಗಬಹುದು.

ಕೊನೆಯದಾಗಿ,
ಇದಷ್ಟೇ ಅಲ್ಲದೆ ಇನ್ನೂ ನಿಮ್ಮ ಒಳ ಮನಸ್ಸಿಗೆ ಹೊಳೆಯುವ ಯಾವುದಾದರೂ ವಿಷಯವಾಗಿರಬಹುದು. ಅದನ್ನು ಉಪಯೋಗಿಸಿಕೊಂಡು ನಿಮ್ಮ ಮನಸ್ಸುಗಳನ್ನು ವಿಶಾಲಗೊಳಿಸಿಕೊಳ್ಳಿ. ಖಂಡಿತವಾಗಿಯೂ ನಿಮ್ಮ ಜೀವನಮಟ್ಟ ತನ್ನಿಂದ ತಾನೇ ‌ಈಗಿರುವ ಸ್ಥಾನಕ್ಕಿಂತ ಉತ್ತಮ ಮಟ್ಟಕ್ಕೆ ಏರುತ್ತದೆ. ಆ ಪ್ರಜ್ಞೆಯೇ ಒಂದು ಅದ್ಬುತ ಮಾನವ ಪ್ರೇಮದ ಸಂಕೇತ. ಸಮಾಜದ, ಪ್ರೀತಿಯ, ದೇಶ ಭಕ್ತಿಯ ಅನುಸಂಧಾನ.

ಸಾಧ್ಯವಾದರೆ ಪ್ರಯತ್ನಿಸಿ………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

10 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

13 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

14 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago