Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

7 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

15 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago