ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.
ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ. ಸರಳತೆ ಮತ್ತು ಸಜ್ಜನಿಕೆ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.
ಓದು ಬರಹ ಬಾರದಿದ್ದರೂ ನಮ್ಮ ಜನಪದರು ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು. ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.
ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…