ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ- ದರ್ಗಾಜೋಗಿಹಳ್ಳಿ ಮಲ್ಲೇಶ್

 

ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ  ಮತ್ತು  ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ  ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ.‌ ಸರಳತೆ ಮತ್ತು ಸಜ್ಜನಿಕೆ‌ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.

ಓದು ಬರಹ ಬಾರದಿದ್ದರೂ ನಮ್ಮ ಜನಪದರು  ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು.  ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು  ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.

ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ  ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ  ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

13 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

18 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago