ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.
ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ- 2025ನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ನಿಯಮಗಳ ಕುರಿತು ತಿಳಿಸಿದ ಅವರು ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು ಎಂದರು.
ಈ ವೇಳೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ನಗರದ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ದೊಡ್ಡಬಳ್ಳಾಪುರ: ಸಮಾಜಸೇವೆಗೆ ಹೆಸರಾಗಿದ್ದ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ನೆನಪಿಗಾಗಿ, ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಶನಿವಾರ ಉಚಿತ ಆರೋಗ್ಯ…
ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ (ಐ ಟಿ ಎಫ್) ಅಹಮದಾಬಾದ್, ಗುಜರಾತ್ ನಲ್ಲಿ ನಡೆದ 40th…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ…
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಲ್ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ-ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ…
ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು…
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…