
ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ವಾಸುದೇವನಹಳ್ಳಿಯಲ್ಲಿ ನಡೆದಿದೆ.
ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ.
ಸುಮಾರು 65ವರ್ಷದ ಈರಣ್ಣ ಅನುಮಾನಾತ್ಮಕವಾಗಿ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..