ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ‌ ಎಸ್ಕೇಪ್ ಆಗಿರೋ ಕಳ್ಳರು

ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ‌ ಕಳ್ಳರು ಎಸ್ಕೇಪ್ ಆಗಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.

ನಗರದ ತ್ಯಾಗರಾಜ ಕಾಲೋನಿಯಲ್ಲಿ ವಾಸವಿರುವ ಅಶ್ವತ್ಥನಾರಾಯಣ ಶೆಟ್ಟಿ, ಶೈಲಜಾ ದಂಪತಿಆರೋಗ್ಯ ಪರೀಕ್ಷೆಗೆಂದು ಮಗನ ಮನೆ ಬೆಂಗಳೂರಿಗೆ ಕಳೆದ ಶುಕ್ರವಾರ ಹೋಗಿದ್ದರು. ಚಿಕಿತ್ಸೆಯ ನಂತರ ಗೌರಿಬಿದನೂರು ನಗರದ ಮನೆಗೆ ವಾಪಸ್ ಬರಬೇಕಾಗಿತ್ತು. ಆದರೆ ಮಕ್ಕಳ ಬಲವಂತದಿಂದ ಸಂಕ್ರಾಂತಿ ಹಬ್ಬಕ್ಕೆ ಬೆಂಗಳೂರಿನ ಮಗನ ಮನೆಯಲ್ಲೇ ಉಳಿದುಕೊಂಡಿದ್ದರು. ಇದೇ ಸಮಯ ಕಳ್ಳರಿಗೆ ಅನುಕೂಲವಾಗಿದ್ದು, ರಾತ್ರಿ ಕಳ್ಳರು ಮನೆಯ ಬೀಗವನ್ನು ಹೊಡೆದು ಮನೆಯಲ್ಲಿದ್ದ ಚಿನ್ನಾಭರಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ.

ಮನೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಎರಡು ಬೀರುವಗಳನ್ನು ತೆಗೆದು 3 ಚಿನ್ನದ ನಕ್ಲೀಸ್, 4 ಚಿನ್ನದ ಚೈನ್‌ಗಳು, ಒಂದು ಜೊತೆ ಬಳೆ, ಒಂದು ಬ್ರಾಸ್ ಲೈಟ್, 7 ಉಂಗರುಗಳೊಂದಿಗೆ ಸುಮಾರು ಒಂದು ಲಕ್ಷ ರೂಗಳ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ಇನ್ನೂ ಮನೆ ದರೋಡೆ ವಿಷಯ ತಿಳಿದು ಪೊಲೀಸರ ಗಮನಕ್ಕೆ ತಂದಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಇದೇ ಮನೆಯ 2ನೇ ಮಹಡಿಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ಆಗ ಸಿ ಸಿ ಕ್ಯಾಮೆರಾ ಇರುವುದರಿಂದ ಜಾಗೃತಗೊಂಡ ಮನೆ ಮಾಲೀಕರು ಸ್ಥಳೀಯ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದು, ಪೊಲೀಸರು ಕಾರ್ಯಪ್ರವೃತ್ತರಾಗಿ ಅನಾಹುತ ತಪ್ಪಿಸಿದ್ದರು. ಆದರೆ, ಈ ದಿನ ಮತ್ತೆ ಕಳ್ಳತನವಾಗಿರುವ ಘಟನೆ ನಡೆದಿದೆ. ಮನೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಊರು ಮತ್ತು ಪ್ರವಾಸ ಇತ್ಯಾದಿ ಕಡೆಗಳಿಗೆ ಹೋಗಬೇಕಾದರೆ ಮಾಹಿತಿ ನೀಡಿ ಹೋಗಿ ಎಂದು ತಿಳಿಸಿದ್ದೇವೆ. ಅವರ ನಿರ್ಲಕ್ಷದಿಂದ ಈ ದಿನ ಕಳ್ಳತನವಾಗಿದೆ. 70 ರಿಂದ 80 ಲಕ್ಷ ಖರ್ಚು ಮಾಡಿ ಮನೆ ಕಟ್ಟುತ್ತಾರೆ.ಆದರೆ 10 ಸಾವಿರ ರೂಪಾಯಿ ಕೊಟ್ಟು ಕ್ಯಾಮೆರಾ ಹಾಕಿಸಿದರೆ ಬಹಳ ಉತ್ತಮ ಅವರಿಗೂ ಸಹ ರಕ್ಷಣೆ ಆಗಿರುತ್ತದೆ ಎಂದು ಕಾರ್ಪೋರೆಟರ್ ಅಮರ್ ಮಾಹಿತಿ ನೀಡಿದ್ದಾರೆ.

ಇನ್ನೂ ಸ್ಥಳಕ್ಕೆ ನಗರಠಾಣೆಯ ಪೊಲೀಸರು ಹಾಗೂ ಬೆರಳಚ್ಚು ತಜ್ಙರು, ಶ್ವಾನ ದಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

9 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

12 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

12 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago