ಮನೆಯಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ತೀವ್ರವಾದ ಸುಟ್ಟ ಗಾಯಗಳಾಗಿರುವ ಘಟನೆ ನೆಲಮಂಗಲ ನಗರದ ವಾಜರಹಳ್ಳಿಯಲ್ಲಿ ನಡೆದಿದೆ.
ವಾಜರಹಳ್ಳಿಯ ನಿವಾಸಿ ವಿಜಯಮ್ಮ ಎಂಬುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ಸಂಜಯ್ (40), ಲೇಖನಾ (5) ವರ್ಷದ ಮಗುವಿಗೂ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಲಿಂಡರ್ ಸ್ಫೋಟದ ಶಬ್ಧಕ್ಕೆ ಮನೆಯಿಂದ ಹೊರಗೆ ಬಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ನೆಲಮಂಗಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.