ಮನೆ ಕಟ್ಟುವ ವಿಚಾರಕ್ಕೆ ಜಗಳ: ಜಗಳದಲ್ಲಿ ವ್ಯಕ್ತಿಯ ಕೈ ಬೆರಳು ಕಟ್

ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ. ಅದೇ ಗ್ರಾಮದ ತಿಮ್ಮರಾಜು‌ ಮತ್ತು ಕುಟುಂಬದವರು ಹಲ್ಲೆ ನಡೆಸಿದ್ದಾರೆ
ಎಂಬ ಆರೋಪ ಕೇಳಿ ಬಂದಿದೆ.

ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು‌ ಎಂಬುವರ‌ ಮೇಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಅರವಿಂದ, ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಐವರು ನಾಪತ್ತೆಯಾಗಿದ್ದಾರೆ. ಉಳಿದವರನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

3 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

6 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

23 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

23 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago