ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ
ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ ಆದಿನಾರಾಯಣ ಎಂಬುವರು ತನ್ನ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪಆಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪವಿಭಾಗ ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ವಲಯ ಹಾಗೂ ಉಪವಿಭಾಗದ ಸಿಬ್ಬಂದಿ ದಾಳಿ ಮಾಡಿದ್ದಾರೆ.
ದಾಳಿ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ್ದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ, ಆರೋಪಿ ಆದಿನಾರಾಯಣನ್ನ NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಇಲಾಖೆ ದಾಳಿಯಲ್ಲಿ ಪರಮೇಶ್ವರಪ್ಪ ಅಬಕಾರಿ ಉಪ ಅಧೀಕ್ಷಕರು ನೆಲಮಂಗಲ ಉಪ ವಿಭಾಗ, ಎಸ್.ಎಂ ಪಾಟೀಲ್ ಅಬಕಾರಿ ನಿರೀಕ್ಷಕರು ದೊಡ್ಡಬಳ್ಳಾಪುರ ವಲಯ, ಶುಭಾಶ್ ಚಂದ್ರ ಅಬಕಾರಿ ನಿರೀಕ್ಷಕರು ನೆಲಮಂಗಲ ಉಪವಿಭಾಗ, ಸಿಬ್ಬಂದಿ ಹನುಮಂತರಾಜು ರಾಜಶೇಖರ, ಬಸಪ್ಪ, ಕೃಷ್ಣ , ಮಂಜುನಾಥ್, ಅಶಾರಾಣಿ, ನಾಗೇಶ್ ಭಾಗವಹಿಸಿದ್ದರು
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…