ಮನೆ ಬಾಗಿಲು ಬೀಗ ಮುರಿದು ಚಿನ್ನಾಭರಣ, ನಗದು ಕಳವು

ದೊಡ್ಡಬಳ್ಳಾಪುರ: ಆಯುದ ಪೂಜೆ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ದೋಚಿರುವ ಪ್ರಕರಣ ನಡೆದಿದೆ.

ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಲಾಗಿದೆ.

ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ ಗಳನ್ನು ಖಾಲಿ ಮಾಡಿ ಕಳವು ಮಾಡಿರುವ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ.

ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಪಂಕಜ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

11 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

17 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago