ಮನೆ ಬಾಗಿಲು ಮೀಟಿ  ನಗದು, ಚಿನ್ನ ಕದ್ದ ಕಳ್ಳರು: ಸ್ಥಳಕ್ಕೆ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಮನೆಯ ಬಾಗಿಲು‌ ಮೀಟಿ ₹1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌ ನಡೆದಿದೆ.

ಇಲ್ಲಿನ ಬಿ.ಎನ್.ನಂಜುಂಡಯ್ಯ ಅವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. ಗೃಹಪ್ರವೇಶ ಮುಗಿಸಿಕೊಂಡ‌ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ‌ ನಾಲ್ಕು ಚಿನ್ನದ ಉಂಗುರ, ಎರಡು‌ ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮನೆಯ ಮೇಲೆ‌ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರುಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು‌ ಮೀಟಿ  ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ. ಭಾನುವಾರ ರಾತ್ರಿಯೇ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಮಾಲೀಕರಾದ ನಂಜುಂಡಯ್ಯ ಹಾಗೂ ಅವರ ಮಗ ಪ್ರಭಾಕರ್ ತಿಳಿಸಿದರು.

ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗು ಸಿಬ್ಬಂದಿ ಪರಿಶೀಲಿಸಿದರು. ಶ್ವಾನದಳ ಕೂಡ ಪರಿಶೀಲನೆ ನಡೆಸಿತು. ನಂಜುಂಡಪ್ಪ‌ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

4 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

10 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

22 hours ago