ಸೆಕ್ಯೂರಿಟಿ ಗಾರ್ಡ್ ಒಬ್ಬ ಮನೆಯ ಮಾಲೀಕನ ಕೈ ಕಾಲು ಕಟ್ಟಿಹಾಕಿ ಮನೆ ದರೋಡೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಮಧುಸೂದನ್ ರೆಡ್ಡಿ ಎಂಬುವರ ಮನೆಯಲ್ಲಿ 30 ಲಕ್ಷ ನಗದು, 250 ಗ್ರಾಂ ಚಿನ್ನ ದೋಚಿ ಎಸ್ಕೇಪ್ ಆಗಿರುವ ಕಳ್ಳರು.
ಮನೆಯಲ್ಲಿ ಮನೆ ಮಾಲೀಕ ಮಧುಸೂದನ್ ರೆಡ್ಡಿ ಒಂಟಿಯಾಗಿದ್ದನ್ನ ಗಮನಿಸಿದ ಸೆಕ್ಯೂರಿಟಿ ಗಾರ್ಡ್, ನಾಲ್ವರು ಸ್ನೇಹಿತರನ್ನು ಕರೆಸಿಕೊಂಡು ಮೊದಲ ಮಹಡಿಯ ಹಿಂಬಾಗಿಲನ್ನ ಮುರಿದು ದರೋಡೆ ಮಾಡಿದ್ದಾರೆ.
ಸ್ಥಳಕ್ಕೆ ಸರ್ಜಾಪುರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.