ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕು ಮೂಲದ ವಿಜಯಕುಮಾರ್ (24) ಬಂಧಿತ ಆರೋಪಿ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಬಂಧಿತ ಆರೋಪಿಯಿಂದ ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 7 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನಾಭರಣಗಳಲ್ಲಿ 65 ಗ್ರಾಂ ತೂಕದ ಚಿನ್ನದ ಚೈನ್, ಮೂರು ಜೊತೆ ಕಿವಿಯೋಲೆಗಳು ಹಾಗೂ ಉಂಗುರ ಸೇರಿದಂತೆ ವಿವಿಧ ಆಭರಣಗಳು ಸೇರಿವೆ.

ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವುದು ಪೊಲೀಸರ ಕಾರ್ಯಾಚರಣೆಯ ಪ್ರಮುಖ ಸಾಧನೆಯಾಗಿದೆ.

ವಿಜಯಪುರ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯ ವಿರುದ್ಧ BNS ಕಾಯ್ದೆಯ ಕಲಂ 303(2), 331(3), 305(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ನಡೆದಿದ್ದವು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

14 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

16 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

21 hours ago