ಕೋಲಾರ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನೇರಪ್ರಸಾರದ ವೀಕ್ಷಣೆ ಕಾರ್ಯಕ್ರಮದ ವ್ಯವಸ್ಥೆಯನ್ನು ಭಾನುವಾರ ಕೋಲಾರ ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇಶದಲ್ಲಿ ರೈತರು, ವ್ಯಾಪಾರಿಗಳು, ಯುವ ಸಮುದಾಯದ ಸೇರಿದಂತೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇರ ಪ್ರಸಾರ ವೀಕ್ಷಣೆಯಲ್ಲಿ ಜಿಲ್ಲೆಯ ವೈದ್ಯರು, ಕಾಲೇಜು ವಿಧ್ಯಾರ್ಥಿಗಳು, ರೈತರು, ವ್ಯಾಪಾರಿಗಳು ವಕೀಲರು, ಕಾರ್ಮಿಕರು ಭಾಗಿಯಾಗಿದ್ದರು.
ಕಾರ್ಯಕ್ರಮದ ನಂತರ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರದ ಜನಪರವಾದ ಯೋಜನೆಗಳ ಕುರಿತು ಗುಣಗಾನ ಮಾಡಿದರು ಅಲ್ಲದೆ ಈ ಹಿಂದೆ ದೇಶದ ಶ್ರೇಷ್ಠ ಪ್ರಶಸ್ತಿಗಳನ್ನ ನೀಡುವುದು, ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ದೇಶವನ್ನು ಮುನ್ನಡೆಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ವಿಕಸಿತ ಭಾರತದ ಕನಸಿನ ಸಂಕಲ್ಪವನ್ನು ನನಸಾಗಿಸಲು ಎನ್.ಡಿ.ಎ ಸರ್ಕಾರವನ್ನು ಬೆಂಬಲಿಸಬೇಕಾಗಿದೆ ಎಂದರು.
ಕೋಲಾರದ ನೇರ ಪ್ರಸಾರ ವೀಕ್ಷಣೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಶಾಸಕ ಬಿ.ಪಿ ವೆಂಕಟಮುನಿಯಪ್ಪ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಮುಖಂಡ ಸಿಎಂಆರ್ ಶ್ರೀನಾಥ್, ಜಿಪಂ ಮಾಜಿ ಸದಸ್ಯ. ಬಿ.ವಿ ಮಹೇಶ್ ಸೇರಿದಂತೆ ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…