ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ.
ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಕುಸಿದು ಅವರ ಮೇಲೆ ಬಿದ್ದಿದೆ. ಈ ಅಪಘಾತದಲ್ಲಿ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.
ಈ ಘಟನೆಯಲ್ಲಿ ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದಂತೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5), ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…