ಬಾಡಿಗೆಗೆ ಇದ್ದ ಶೆಡ್ ನಲ್ಲಿ ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ದುರ್ಮರಣ ಹೊಂದಿದ್ದಾರೆ.
ಅಸ್ಸಾಂ ರಾಜ್ಯದಿಂದ ಕೆಲಸಕ್ಕೆಂದು ಹೊಸಕೋಟೆಗೆ ಬಂದಿದ್ದ ಯುವಕರು, ಮುತ್ಸಂದ್ರ ಗ್ರಾಮದಲ್ಲಿನ ಛೋಟಾಸಾಬ್ ರವರಿಗೆ ಸೇರಿದ ಲೇಬರ್ ಶೆಡ್ ಗೆ ಬಾಡಿಗೆಗೆ ಇದ್ದರು.
ನಾಲ್ಕು ಮಂದಿ ಯುವಕರು ಮಲಗಿರುವ ರೀತಿಯಲ್ಲೇ ಸಾವನ್ನಪ್ಪಿದ್ದಾರೆ.
ಜಯಂತ್ ಸಿಂಧೆ (25 ), ನೀರೇಂದ್ರನಾಥ್ ಟೈಡ್ (24), ಡಾಕ್ಟರ್ ಟೈಡ್ (25), ಧನಂಜಯ್ ಟೈಡ್ (20) ಮೃತ ದುರ್ದೈವಿಗಳು.
ಮೃತ ಯುವಕರು ಕೋಕಾಕೋಲಾ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ದೂರು ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮುಂದುವರಿದಿದೆ…
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…