ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಜಿಲ್ಲಾಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಉದ್ಘಾಟನೆ ನೆರವೇರಿಸಿ ಅವರು ಹೇಳಿದರು.
ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು. ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ. ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…