ಮಳೆಗಾಗಿ ಗಂಡು ಮಕ್ಕಳಿಬ್ಬರಿಗೆ ಮದುವೆ ಮಾಡಿ ಮಳೆರಾಯನ ಮೊರೆ ಹೋದ ಗ್ರಾಮಸ್ಥರು

ಮಳೆಗಾಗಿ ಕಪ್ಪೆಗಳ ಮದುವೆ, ಕತ್ತೆಗಳ ಮದುವೆ, ಹಸು-ಕರುವಿಗೆ ಮದುವೆ ಹೀಗೆ ನಾನಾ ರೀತಿಯ ಆಚರಣೆಗಳನ್ನು ಹಿಂದಿನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಅದೇರೀತಿ  ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೊಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಂಡು ಮಕ್ಕಳಿಬ್ಬರಿಗೆ ಮದುವೆ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಲಾಯಿತು.

ಗ್ರಾಮಸ್ಥರು ಮಳೆಗಾಗಿ ಕಳೆದ 5 ದಿನಗಳಿಂದ‌ ಗ್ರಾಮದ ದೊಡ್ಡಮ್ಮ ದೇವಾಲಯದ ಬಳಿ ಚಂದಾಮಾಮನ ಚಿತ್ರ ಬಿಡಿಸಿ ಪೂಜೆ ನಡೆಸಿದ್ದು, ಅಂತಿಮ ದಿನವಾದ ಮಂಗಳವಾರ ರಾತ್ರಿ ಮದುವೆ ಕಾರ್ಯಕ್ರಮ ಏರ್ಪಡಿಸಿದ್ದರು.

ಸಂಜೆ 7 ಗಂಟೆಯಿಂದಲೇ ಗ್ರಾಮದ ಮಹಿಳೆಯರು ಸೇರಿಕೊಂಡು ಗ್ರಾಮದ ಬೀದಿ ಸ್ವಚ್ಛಗೊಳಿಸಿ ಅರ್ಧ ಹಾಗೂ ಪೂರ್ಣವಾದ ಎರಡು ಚಂದ್ರನಂತೆ ರಂಗೋಲಿ ಬಿಡಿಸಿದ್ದು, ನಾನಾ ಬಗೆಯ ಪುಷ್ವಗಳಿಂದ ಅಲಂಕರಿಸಿದರು. ರಾತ್ರಿ 8.30 ರ ಬಳಿಕ ತಿಂಗಳ ಮಾಮನ ಪೂಜೆ ಆರಂಭಗೊಂಡಿತು, ಮೊದಲಿಗೆ ಸಿಂಗಾರಗೊಂಡಿದ್ದ ವಧು-ವರರನ್ನು ತಿಂಗಳ ಮಾಮನ ಎದುರು ಅಲಂಕರಿಸಿದ ಖುರ್ಚಿ ಮೇಲೆ ಕುಳ್ಳರಿಸಿ, ರಾಗಿ ರೊಟ್ಟಿ, ಚಿಗಣಿ, ತಂಬಿಟ್ಟಿನ ಆರತಿ ಹಾಗೂ ಫಲ-ಪುಷ್ವಗಳನ್ನಿಟ್ಟು ಶಾಸ್ತ್ರಗಳನ್ನು ನೆರವೇರಿಸಿದರು. ಹಿರಿಯ ತಾಯಂದಿರು ಮದುವೆಯ ಹಾಗೂ ತಿಂಗಳ ಮಾಮನ ಮೇಲೆ ಸೋಬಾನೆ ಪದ ಹಾಡಿದರೆ, ಮಹಿಳೆಯರು ವಧು-ವರನಿಗೆ ಆರತಿ ಬೆಳಗಿದರು. ಹುಡುಗರನ್ನು ವಧು-ವರನಂತೆ ಸಿಂಗರಿಸಿದ್ದು, ಸಂಪ್ರದಾಯದಂತೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

4 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

12 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

14 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

18 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

19 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

21 hours ago