ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.

ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.

ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು.

ನಂತರ ಎಲ್ಲಾ ಗ್ರಾಮಸ್ಥರು ಒಂದೆಡೆ‌ ಸೇರಿ ಕಲೆತು ಮಳೆರಾಯನ ಕುರಿತು ಹಾಡುಗಳನ್ನು ಹಾಡಿದರು. ನೃತ್ಯ ಮಾಡಿ ಈಗಲೇ ಬಾರೋ ಮಳೆರಾಯ ಎಂದು ಕರೆದಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

17 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago