ಮಳೆಗಾಗಿ ನಡೆದ ಗಂಡುಮಕ್ಕಳ ಮದುವೆ ಆಚರಣೆ: ಈಗಲೇ ಬಾರೋ ಮಳೆರಾಯ ಎಂದು ವರುಣದೇವನಲ್ಲಿ ಪ್ರಾರ್ಥನೆ

 

ರಾಜ್ಯಕ್ಕೆ ಈಗಾಗಲೇ ಮುಗಾರು ಪ್ರವೇಶ ಮಾಡಿ ಹಲವು ದಿನಗಳು ಕಳೆದಿವೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಮಳೆ ಬರುತ್ತೆಂದು ಬಿತ್ತನೆ ಬೀಜ ಬಿತ್ತಿದ್ದರು ಈಗ ಮಳೆ ಕೈಕೊಟ್ಟ ಹಿನ್ನೆಲೆ ಮಳೆ ಯಾವಾಗ ಬರುತ್ತೆ ಎಂದು ಆಕಾಶದತ್ತ ನೋಡುವ ಹಾಗೆ ಆಗಿದೆ.

ಈಗಾಗಲೇ ಮಳೆಗಾಗಿ ತಾಲೂಕಿನ ಗ್ರಾಮಗಳಲ್ಲಿ ಮಳೆರಾಯನಿಗಾಗಿ ಗ್ರಾಮ್ಯ ಸೊಗಡಿನ ವಿಶೇಷ ಪೂಜೆ, ಆಚರಣೆಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣದೇವರನ್ನು ಪ್ರಾರ್ಥಿಸಿದ್ದಾರೆ.

ಮದುವೆಯಲ್ಲಿ ವರ ಹಾಗೂ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ಶಶಾಂಕ್, ವರನಾಗಿ ಅರವಿಂದ್ ಸಜ್ಜಾಗಿ ಪೂಜೆಗೆ ಕುಳಿತಿದ್ದರು. ನಂತರ ಎಲ್ಲಾ ಗ್ರಾಮಸ್ಥರು ಒಂದೆಡೆ‌ ಸೇರಿ ಕಲೆತು ಮಳೆರಾಯನ ಕುರಿತು ಹಾಡುಗಳನ್ನು ಹಾಡಿದರು. ನೃತ್ಯ ಮಾಡಿ ಈಗಲೇ ಬಾರೋ ಮಳೆರಾಯ ಎಂದು ಕರೆದಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

10 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago