ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ ರೈತಾಪಿ ವರ್ಗ.
ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.
ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.
ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.
ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.