ಮಳೆಗಾಗಿ ಸೂರ್ಯ-ಚಂದ್ರರಿಗೆ ವಿಶೇಷ ಪೂಜೆ: ಜಾನಪದ ಹಾಡುಗಳ ಮೂಲಕ ಮಳೆಗಾಗಿ ಪ್ರಾರ್ಥನೆ

ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ‌ ರೈತಾಪಿ ವರ್ಗ.

ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣದೇವನ ಮೊರೆ ಹೋಗಲಾಗುತ್ತದೆ.

ರೈತನ‌ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು.

ಕೆಲ ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಉದ್ಭಬ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದರು.

ಮಳೆರಾಯನ ಕೃಪೆಗಾಗಿ ಈ ರೀತಿ ಈಗಾಗಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಸೊಗಡಿನ ಪೂಜೆ ಪುನಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಮಾಡಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

2 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

5 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

5 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

6 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

9 hours ago