ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.
ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ(KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…