ಮಳೆಯಿಲ್ಲದೆ ಕಮರಿದ ಬೆಳೆಗಳು: ಆಕಾಶದತ್ತ ಮುಖ ಮಾಡಿದ ರೈತ: ಮಳೆಗಾಗಿ ವಿಭಿನ್ನ ಆಚರಣಗಳ ಮೊರೆ ಹೋದ ಜನ: ಇಬ್ಬರು ಗಂಡು‌ ಮಕ್ಕಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ

ತಾಲೂಕಿನಲ್ಲಿ ಕೆಲ ದಿನಗಳಿಂದ ಮಳೆಯಿಲ್ಲದೆ ಬೆಳೆಗಳು ಕಮರಿಹೋಗುತ್ತಿದ್ದು, ಇದರಿಂದ ರೈತರು ಕಂಗಾಲಾಗಿ ಆಕಾಶದತ್ತ ಮುಖ‌ ಮಾಡಿ ಮಳೆಗಾಗಿ ಕಾದು ಕುಳಿತಿದ್ದಾರೆ.

ತಾಲೂಕಿನ ಕೆಲ ಗ್ರಾಮಗಳಲ್ಲಿ ಮಳೆಗಾಗಿ ಹಳೆ ಕಾಲದ ಆಚರಣೆಗಳ ಮೊರೆ ಹೋಗುತ್ತಿದ್ದಾರೆ.

ತಾಲೂಕಿನ‌ ಸಾಸಲು ಹೋಬಳಿಯ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಇಬ್ಬರು ಗಂಡು ಮಕ್ಕಳ ಜೋಡಿಗೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಒಬ್ಬ ಹುಡುಗನನ್ನು ಮದು ಮಗನಾಗಿ, ಇನ್ನೊಬ್ಬ ಹುಡುಗನನ್ನು ಥೇಟ್ ಮದು ಮಗಳಂತೆ ಸಿಂಗರಿಸಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ, ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

ಈ ರೀತಿ ಆಚರಣೆ ಮಾಡಿದರೆ ಮಳೆಯಾಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರಿಗಿದೆ. ಇನ್ನೂ ಕೆಲ ಗ್ರಾಮಗಳಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯವಾಗಿದೆ. ಒಂದೊಂದು ಕಡೆ  ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago