ಮಳೆ ಅವಾಂತರಕ್ಕೆ ವ್ಯಕ್ತಿ ಸಾವು: ರೈಲ್ವೆ ಅಂಡರ್ ಪಾಸ್ ಬಳಿ ಮಳೆ ನೀರಿನಿಂದ ತುಂಬಿದ್ದ ಹಳ್ಳಕ್ಕೆ ಬಿದ್ದು ವ್ಯಕ್ತಿ ಮೃತ: ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ

ಶ್ರೀನಗರದ ಬಳಿ ಇರುವ ರೈಲ್ವೆ ಅಂಡರ್ ಪಾಸ್ ಬಳಿ ಕಾಮಗಾರಿ ನಡೆಯುತ್ತಿರುವ ಬದಿಯ ನೀರು ತುಂಬಿರುವ ಜಾಗದಲ್ಲಿ ಕಾಲಿ ಜಾರಿ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಸವಾಡಿಯ ಕೋಡಿಹಳ್ಳಿ ಗ್ರಾಮದ ವಿ.ಉಮೇಶ್ (42), ಮೃತಪಟ್ಟಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತನ‌ ಅಂಗಿಯ ಜೇಬಿನಲ್ಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆಧಾರ್ ಕಾರ್ಡ್ ಸುಳಿವಿನಿಂದ ಮೃತನ ಹೆಸರು, ವಿಳಾಸ ತಿಳಿದು ಬಂದಿದೆ. ಸ್ಥಳಕ್ಕೆ ನಗರ‌ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಡಿದ ನಶೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳೆ ಹಾನಿ, ಮನೆಗಳ ಮೇಲ್ಛಾವಣಿ ಹಾರಿಹೊಗಿರುವ ಘಟನೆಗಳ ಮಧ್ಯೆ, ಹಲವು ಮರಗಳು ಧರೆಗುರಿಳಿವೆ. ಬೆಂಗಳೂರಿನ ಕೆ.ಆರ್ ವೃತ್ತದ ಕೇಳ ಸೇತುವೆ ಬಳಿ ಕಾರಿನಲ್ಲಿ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದೊಡ್ಡಬಳ್ಳಾಪುರದ ರೈಲ್ವೆ ಅಂಡರ್ ಪಾಸ್ ಬಳಿ ಸೃಷ್ಟಿಯಾಗಿದ್ದ ಹಳ್ಳಕ್ಕೆ ಮಳೆಯ ನೀರು ಹರಿದು ಬೃಹತ್ ಹೊಂಡ ಸೃಷ್ಟಿಯಾಗಿದೆ. ಮಳೆ ನೀರಿನಿಂದ ತುಂಬಿದ್ದ ಹಳ್ಳಕ್ಕೆ ಸುಮಾರು 42 ವರ್ಷದ ವ್ಯಕ್ತಿ ಓರ್ವ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

 

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

12 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

16 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

19 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago