ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರು ಎಕರೆಗಟ್ಟೆಲೆ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ವರದಿಯಾಗಿತ್ತು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ 21ರಂದು ಪ್ರತಿಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಮಳೆಗೆ ತಾಲೂಕಿನ ಹಲವು ತೋಟಗಳು ಹಾನಿಯೊಳಗಾಗಿವೆ, ಜಿಂಕೆಬಚ್ಚಹಳ್ಳಿ, ಕಸುವನಹಳ್ಳಿ, ಬಿಸುವನಹಳ್ಳಿ ಗ್ರಾಮದ ಬಹುತೇಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ, ಕಸವನಹಳ್ಳಿ ಗ್ರಾಮದ ರೈತ ರವಿಚಂದ್ರರವರಿಗೆ ಸೇರಿದ ಹೀರೇಕಾಯಿ, ಹೂಕೋಸು, ಸೇವಂತಿಗೆ ಬೆಳೆಗಳು ನಾಶವಾಗಿದೆ, ರಾಜಣ್ಣರವರಿಗೆ ಸೇರಿದ ಹೂಕೋಸು ಬೆಳೆನಾಶವಾಗಿದೆ, ಇದರ ಜೊತೆಗೆ ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ, ಹಂದಿ ಸಾಕಾಣಿಯ ಶೇಡ್ ಜಖಂಗೊಂಡಿದೆ, ಬಿರುಗಾಳಿಯ ರಭಸಕ್ಕೆ ತೆಂಗಿನ ಮರಗಳು ಬುಡ ಸಮೇತ ಕಿತ್ತು ಬಂದಿವೆ, ಸುತ್ತಮುತ್ತಲಿನ ಗ್ರಾಮ ಬಹುತೇಕ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿವೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…