ರಾತ್ರಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ಈ ಘಟನೆ ನಡೆದಿದೆ.
ಮನೆಗಳ ಸುತ್ತಮುತ್ತಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಜನರು ಓಡಾಡಲು ಪರಿತಪಿಸುವಂತಾಗಿದೆ.
ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ನೆಲಸಿವೆ. ಮನೆ ಮುಂದೆ, ಅಕ್ಕಪಕ್ಕದ ಗುಂಡಿಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ಮನೆಗಳಿಂದ ಕೆಲಸಕ್ಕೆ ಹೊರಡಲು, ಶಾಲೆಗಳಿಗೆ ಮಕ್ಕಳನ್ನು ಬಿಡಲು ಇನ್ನಿತರೆ ಕೆಲಸ ಕಾರ್ಯಗಳಿಗೆ ಹೋಗಲು ಪರದಾಡುತ್ತಿದ್ದಾರೆ.
ದಲಿತ ಕಾಲೋನಿಯನ್ನು ಅಭಿವೃದ್ಧಿಪಡಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.