ಮಳೆ‌ ತಂದ ಅವಾಂತರ; 23 ವರ್ಷದ ಯುವತಿ ಸಾವು; ಸಿಎಂ ಸಿದ್ದರಾಮಯ್ಯ ಸಾಂತ್ವನ

ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ ಅಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನು ರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.

ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Leave a Reply

Your email address will not be published. Required fields are marked *