ಮಳೆ… ಮಳೆ…. ಜಡಿ ಮಳೆ… ಜನ, ಜಾನುವಾರು ವಿಲವಿಲ… ಸೂರ್ಯನ ದರ್ಶನಕ್ಕಾಗಿ ಜನ ವೈಟಿಂಗ್…

ರಾಜ್ಯದ ಹಲವು ಕಡೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಜನ‌ಜೀವನ ಅಸ್ತವ್ಯಸ್ಥಗೊಂಡಿದ್ದು, ಜಾನುವಾರು, ಪಕ್ಷಿಗಳು ಮಳೆಯಲ್ಲಿ ನೆಂದು ನೆಂದು ತೊಪ್ಪೆಯಾಗಿವೆ. ವೃದ್ಧರು, ರೋಗಿಗಳು ಚಳಿ, ಮಳೆಯ ತೇವಾಂಶದಿಂದ ಜೀವ ಭಯದಲ್ಲಿದ್ದಾರೆ. ಕೂಲಿಕಾರರು, ಕಾರ್ಮಿಕರು, ಉದ್ಯೋಗಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ಕೆಲಸಕ್ಕೆ, ತರಗತಿಗಳಿಗೆ ಹೋಗಲು ಆಗದೇ ಪರಿತಪಿಸುತ್ತಿದ್ದಾರೆ.

ಕಳೆದೆರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು ಈಗ ಬಿಟ್ಟು ಬಿಡದೆ ಧೋ ಎಂದು ಸುರಿಯಿತ್ತಿರುವ ಮಳೆಗೆ ಹೈರಣಾಗಿ ಹೋಗಿದ್ದಾರೆ. ಅರೆಬರೆ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯಿಂದ ಅದು ಕೂಡ ಕೈತಪ್ಪಿ ಹೋಗುವ ಭೀತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿಯಾದ ತೇವಾಂಶದಿಂದ ನೆಲಕಚ್ಚುತ್ತಿವೆ. ತಗ್ಗು ಪ್ರದೇಶದಲ್ಲಿ ವಾಸ ಮಾಡುವವರಿಗೆ ಮನೆಗಳಿಗೆ ನೀರು ನುಗ್ಗುವ ಭೀತಿಯಲ್ಲಿದ್ದಾರೆ. ಕೆಲ ಮನೆಗಳ ಮೇಲ್ಛಾವಣಿ ಸೋರುತ್ತಿವೆ. ಹಳೇ ಮನೆಗಳು ನೆಲಕ್ಕುರುಳಿತ್ತಿವೆ. ವ್ಯಾಪಾರಸ್ಥರಿಗೆ ಸರಿಯಾಗಿ ವ್ಯಾಪಾರವಾಗದೇ ಮಂಕಾಗಿದ್ದಾರೆ. ಹೀಗೆ ಜಡಿ ಮಳೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿ ಸಮಸ್ಯೆ ತಂದೊಡ್ಡಿದೆ.

ಕೆಲವು ಕಡೆ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗಿದೆ. ಕೆಲವರು ವಿಧಿ ಇಲ್ಲದೇ ಕೊಡೆ ಹಿಡಿದು ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದಾರೆ. ಕೆಲ ಮಣ್ಣಿನ ರಸ್ತೆಗಳು ಜಲಾವೃತಗೊಂಡು ಕೆಸರುಗದ್ದೆಯಂತಾಗಿವೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳೇ ಕಾಣದಂತಾಗಿ ವಾಹನ ಸವಾರರು ಅಪಘಾತದ ಭೀತಿಯಲ್ಲಿ ಸಂಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ…

ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಕಾರಣ ಇನ್ನೂ 2-3 ದಿನ ಇದೇ ರೀತಿಯ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಟ್ಟಿನಲ್ಲಿ ಸೂರ್ಯನ ದರ್ಶನಕ್ಕಾಗಿ ಜನ ಕಾಯುತ್ತಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago