ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದ ಗಾಂಧಿವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿಯವರು ಅಹಿಂಸೆಯ ಮಾರ್ಗದಲ್ಲಿ ದೇಶಾದ್ಯಂತ ಲಕ್ಷಾಂತರ ಜನರನ್ನು ಒಗ್ಗೂಡಿಸಿ ಹೋರಾಟದ ಮಂತ್ರದ ಮೂಲಕವೇ ಉಪವಾಸ ಸತ್ಯಾಗ್ರಹ ಮಾಡಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದ ಹೋರಾಡಿದ್ದಾರೆ. ಅವರ ತ್ಯಾಗ ಬಲಿದಾನದ ಪ್ರತೀಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅದು ಪ್ರಸ್ತುತ ದಿನಗಳಲ್ಲಿ ಸದುಪಯೋಗವಾಗಬೇಕು ಎಂದು ಅಭಿಪ್ರಾಯ ಪಟ್ಟರು,
ದೇಶದಲ್ಲಿ ಗಾಂಧೀಜಿಯವರ ಹಾದಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರನ್ನು ಸಹ ನೆನೆಯಬೇಕಾಗಿದೆ ಭಾರತ ದೇಶವು ವಿವಿಧ ಭಾಷೆ ಸಂಸ್ಕೃತಿಗಳಿಂದ ಬೆಳೆದಿದೆ ದೇಶಕ್ಕಾಗಿ ಪ್ರತಿ ಹಂತದಲ್ಲೂ ಕೊಡುಗೆ ಕೊಟ್ಟ ಅಂತಹ ಮಹನೀಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ನಡೆಯಬೇಕು ಜೊತೆಗೆ ಯವ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿ ಹೇಳಬೇಕಾಗಿದೆ ಎಂದರು.
ದೇಶದಲ್ಲಿ ನಾವು ಎಲ್ಲರೂ ಅಣ್ಣತಮ್ಮಂದಿರ ರೀತಿಯಲ್ಲಿ ಬದುಕಬೇಕು ಸಣ್ಣಪುಟ್ಟ ಜಗಳಗಳು ಸಹಜವಾಗಿದ್ದು ಅವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಸಮಸ್ಯೆಗಳು ಇದ್ದರೆ ಪರಿಹಾರ ಮಾಡಿಕೊಳ್ಳೋಣ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದು ಒಳ್ಳೆಯ ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದು ಅವರ ಬೆಂಬಲವಾಗಿ ನಿಲ್ಲಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಾಂಧಿವನದವರೆಗೂ ಕಾಲ್ನಡಿಗೆ ಜಾಥಾ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಜಯದೇವ್ ನಾಗರಾಜ್, ಮೈಲಾಂಡಹಳ್ಳಿ ಮುರಳಿ, ಮೀನುಗಾರಿಕೆ ರಂಗನಾಥ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ಹೊನ್ನೇನಹಳ್ಳಿ ಯಲ್ಲಪ್ಪ, ಮುಂತಾದವರು ಇದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…