ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರ ಸಹಕಾರ ಅಗತ್ಯ – ಶಾಸಕ‌ ಧೀರಜ್ ಮುನಿರಾಜ್

ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.

ರಾಮಾಯಣ ಮಹಾಭಾರತ ಕಾವ್ಯಗಳನ್ನು ಮಕ್ಕಳು ಓದಬೇಕು. ಅದೇರೀತಿ ಎಲ್ಲಾ ಧರ್ಮಗಳ ಜನರು ಓದುವಂತಹ ಪುಸ್ತಕಗಳು ರಾಮಾಯಣ ಹಾಗೂ ಮಹಾಭಾರತ. ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದರು.

ಸಮುದಾಯದ ಹಿರಿಯ ಮುಖಂಡ ಮುನಿಕೃಷ್ಣಪ್ಪ ಮಾತಾಡಿ, ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು, ಪ್ರತಿಯೊಬ್ಬರೂ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ 17ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ವಾಲ್ಮೀಕಿ ಜಯಂತಿಯಂದು ನಗರದ ಪ್ರಮುಖ ರಸ್ತೆಗಳಲ್ಲಿ  ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕ ಉಮಾಪತಿ, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್  ಕುಮಾರ್, ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago