ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…