Categories: ಕೋಲಾರ

ಮಹಿಳಾ ಕಾಲೇಜಿನ ಹೊಸ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.

ಬಾಲಕರ ಕಾಲೇಜಿನಲ್ಲೂ ಕಳಪೆ ಕಾಮಗಾರಿಯಾಗಿದೆ ಎಂದು ವರದಿಯಾಗಿದೆ ಕೂಡಲೇ ಎನ್.ಡಿ.ಟಿ ವತಿಯಿಂದ ಪರಿಶೀಲನೆ ನಡೆಸಿ ಯಾರು ಗುತ್ತಿಗೆದಾರರು ಯಾವ ಏಜೆನ್ಸಿ ಅಂತ ಕೂಡಲೇ ವರದಿ ಕೊಡಬೇಕು ಎಂದು ಆದೇಶ ನೀಡಿದರು ಇದೇ ಸಂದರ್ಭದಲ್ಲಿ ಕಾಲೇಜಿನ ಶೌಚಾಲಯ ಸೇರಿದಂತೆ ನೀರಿನ ವ್ಯವಸ್ಥೆ ಸರಿಯಾಗಿಲ್ಲ ವಿಧ್ಯಾರ್ಥಿಗಳು ಕಂಡಾಗ ಬಸ್ ನಿಲ್ಲಿಸಲ್ಲ ಎಂದು ವಿಧ್ಯಾರ್ಥಿಗಳು ಸಚಿವರ ಮುಂದೆ ಇಟ್ಟರು ಕೂಡಲೇ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡು ನೋಡಿ ಇಲ್ಲಿ ಬಡವರ ಮಕ್ಕಳು ಹೆಚ್ಚಾಗಿ ಬರೋದು ಅವರ ಯೋಗಕ್ಷೇಮ ಮುಖ್ಯ ಮುಂದೆ ಈ ರೀತಿಯಲ್ಲಿ ಆಗದಂತೆ ನೋಡಿಕೊಳ್ಳಿ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಪೋನ್ ಮಾಡಿ ನಿಮ್ಮ ಬಸ್ ಚಾಲಕರು ಮತ್ತು ನಿರ್ವಾಹಕರು ಬಾಸ್ ಗಳು ಆಗಿದ್ದಾರೆ ನೀವು ನೇರವಾಗಿ ಆದೇಶ ಮಾಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

6 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

12 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago