ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಅವರು ಇಂದು ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು , ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ , ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ,ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು , ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು.ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.

*ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ*

ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯ ಮೆಚ್ಚಿದರು. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು. ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ (SDG) ಡ್ಯಾಶ್‌ಬೋರ್ಡ್ ವೀಕ್ಷಿಸಿ ಶ್ಲಾಘಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago