ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ದಿನಾಚರಣೆ ಅಂಗವಾಗಿ ದೃಷ್ಟಿ ದೋಷ ಹಾಗೂ ಶ್ರವಣ ದೋಷ ಚಿಕಿತ್ಸೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆ.ಸಾರಥಿ ಸತ್ಯಪ್ರಕಾಶ್ ಅವರು ತಿಳಿಸಿದರು.
ಕನ್ನಡ ಚಿತ್ರರಂಗದಲ್ಲಿ ನನಗೆ ಹೆಸರು ಮಾಡಿಕೊಟ್ಟಿದ್ದು ಸಾರಥಿ ಸಿನಿಮಾ, ಈ ಸಿನಿಮಾ ಬಳಿಕ ನನ್ನ ಕೈಲಿ ಸಾಕಷ್ಟು ಚಿತ್ರಗಳು ನಿರ್ಮಾಣ ಮಾಡುವ ಅವಕಾಶಗಳಿದ್ದವು ಆದರೇ ನಾನು ನನ್ನ ತಾಲ್ಲೂಕಿನಲ್ಲಿ ಸಮಾಜ ಸೇವೆ ಮಾಡುವುದು ಬಹುದಿನಗಳ ಕನಸಾಗಿತ್ತು ಆದ್ದರಿಂದ, ಕಳೆದ ಫೆಬ್ರವರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಉಚಿತವಾಗಿ ಶ್ರವಣದೋಷ ನಿವಾರಕ ಯಂತ್ರ ಮತ್ತು ಕನ್ನಡಕ ವಿತರಣೆ ಮಾಡಲಾಗುತ್ತಿದೆ ಎಂದರು.
ತಾಲ್ಲೂಕಿನ ಜನತೆ ಆಶೀರ್ವಾದ ನೀಡಿದರೆ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಸೇವೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಟಿ.ವಿ ಲಕ್ಷ್ಮಿ ನಾರಾಯಣ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅಶ್ವತ್ಥನಾರಾಯಣ ನಗರಸಭಾ ಸದಸ್ಯರಾದ ಶಿವಶಂಕರ್, ಶಿವಣ್ಣ, ಹಂಸವೇಣಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ, ಪ್ರಮಿಳಾ ಮಹದೇವ್, , ಜನಪರ ಮಂಜುನಾಥ್, ಚೌಡರಾಜ್, ಪ್ರದೀಪ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…