ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.
ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್, ಸರ್ವೈಕಲ್ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್ ಕ್ಯಾನ್ಸರ್ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.
ಡೆಂಟಲ್ ಡೆನ್ ನಿರ್ದೇಶಕಿ ಹಾಗೂ ವಾಕಥಾನ್‌ನ ರೂವಾರಿ ಡಾ. ಲಕ್ಷ್ಮಿ ರೂಪೇಶ್ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್ ವಾಕಥಾನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…