ನಗರದ ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಇಂದು ಸಂಜೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಗಾಯಾಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಾಳುವನ್ನು ದೇವನಹಳ್ಳಿ ತಾಲ್ಲೂಕಿನ ಉಗನವಾಡಿ ಗ್ರಾಮದ ರಾಕೇಶ್ (35) ವರ್ಷ ಎಂದು ತಿಳಿದು ಬಂದಿದೆ.
ಮಹಿಳಾ ಪೊಲೀಸ್ ಠಾಣಾ ಪಕ್ಕದಲ್ಲೆ ನೂತನವಾಗಿ ಶೌಚಾಲಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಂದು ರಜೆ ಇದ್ದ ಕಾರಣ ನಾಳಿನ ಕಾಮಗಾರಿಗೆ ಇಂದೇ ಕಬ್ಬಿಣದ ಕಂಬಿಗಳನ್ನು ಕಟ್ಟಡದ ಮೇಲೆ ಇಡುವುದಕ್ಕೆ ಹೋದಾಗ ಘಟನೆ ನಡೆದಿದೆ.
ವ್ಯಕ್ತಿಯ ದೇಹದ ಬಲಭಾಗದಲ್ಲಿ ಸುಮಾರು 20% ರಷ್ಟು ಸುಟ್ಟಗಾಯಗಳಾಗಿದೆ. ಚಿಕಿತ್ಸೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು, ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಲು ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.