ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago