ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ ಎಫ್ ಐಆರ್ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಮಹಿಳಾ ಪ್ರಯಾಣಿಕರ ಮೇಲೆ ಕೈ ಹಾಕುತ್ತಿರುವ ಸರ್ಕಾರಿ ಬಸ್ ನಿರ್ವಾಹಕ… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈತ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…