ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲು ವಿಶೇಷವಾಗಿ 5% ಅನುದಾನವನ್ನು ನೀಡಲು ಭರವಸೆ ನೀಡಿ ಹಾಗೂ ಇನ್ನೂ ಹೆಚ್ಚಿನದಾಗಿ ಅನುದಾನ ಮತ್ತು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಹಾಗೂ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುತ್ತದೆ ಎಂದು ಕಸಘಟ್ಟಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂದ್ಯಾ ದೇವರಾಜ್ ಹೇಳಿದರು.
ಇಂದು ಯಲಹಂಕ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಕಸಘಟ್ಟಪುರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಹಿಳಾ, ಮಕ್ಕಳ ಮತ್ತು ವಿಶೇಷಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಭಾಗವಹಸಿ ಮಾತನಾಡಿದರು.
ಈ ವೇಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಸಿ, ಆಹಾರ ಮತ್ತು ನಾಗರೀಕ ಸರಬರಾಜು ಜಂಟಿ ನಿರ್ದೇಶಕರಾದ ಜಿ. ಸೌಮ್ಯ, ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಾಶಂಕರ್ ಬಿ.ಎನ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಚುನಾಯಿತ ಪ್ರತಿನಿಧಿಗಳು, ಶಾಲಾ ಮುಖ್ಯಸ್ಥರು, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…