ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿ ಅಗತ್ಯ- ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ಹಾಗೂ ರುಡ್‌ಸೆಟ್‌ ಸಂಸ್ಥೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಅವರು ಮಾತನಾಡಿದರು.

ಜೂಟ್‌ ಉತ್ಪನ್ನಗಳು ಬಹುಬೇಡಿಕೆಯನ್ನು ಹೊಂದಿದ್ದು, ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಇದು ಕೈಜೋಡಿಸಲಿದೆ. ಅಂತೆಯೇ ಇದು ಪರಿಸರಸ್ನೇಹಿಯಾಗಿದ್ದು, ದಿನನಿತ್ಯದ ಬಳಕೆಗೆ ವಿವಿಧ ಮಾದರಿಗಳ ಜೂಟ್‌ ಆಧಾರಿತ ಉತ್ಪನ್ನಗಳನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ ಅವರು ಮಾತನಾಡಿ, ತರಬೇತಿ ಪೂರ್ಣಗೊಳಿಸಿರುವ ಎಲ್ಲಾ ಮಹಿಳೆಯರು ತಮ್ಮ ಮನೆಗಳಲ್ಲಿ ವೈಯಕ್ತಿಕವಾಗಿ ಅಥವಾ ಗುಂಪು ಚಟುವಟಿಕೆಗಳ ಮೂಲಕ ಜೂಟ್‌ ಆಧಾರಿತ ಉತ್ಪನ್ನ ತಯಾರಿಸಿ, ಆದಾಯ ಹೊಂದಬಹುದು ಎಂದರಲ್ಲದೆ, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುವ ಮಾಸಿಕ ಸಂತೆಗಳು, ವ್ಯಾಪಾರ ಮೇಳಗಳಲ್ಲಿ ಜೂಟ್‌ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ತರಬೇತಿ ಮೂಲಕ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಹಾಗೂ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ವಿದ್ಯಾ ಹೊಸಮನಿ ಸೇರಿದಂತೆ ಜೂಟ್‌ ಉತ್ಪನ್ನ ತಯಾರಿಕಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

24 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago