ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಮತ್ತು ಆಡಿಯೋ ತುಣುಕುಗಳಲ್ಲಿ ಇನ್ಸ್‌ಪೆಕ್ಟರ್ ಅವರ ವರ್ತನೆ ಅತ್ಯಂತ ಅನುಮಾನಾಸ್ಪದವಾಗಿತ್ತು. ವಿಶೇಷವಾಗಿ ಫೋನ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅವರು ನಡೆಸಿದ ಅಸಭ್ಯ ಸಂಭಾಷಣೆಯು ಪೊಲೀಸ್ ಇಲಾಖೆಯ ಘನತೆಗೆ ಕುಂದು ತಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…