ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರ ಬಂಧನ

ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಹಿಳೆಯ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರನ್ನು ಪತ್ತೆ ಮಾಡಿ ಬಂಧಿಸಿ ಒಡವೆಗಳನ್ನು ಮತ್ತು ಹಣವನ್ನು ಗೌರಿಬಿದನೂರು ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನ.16ರಂದು ಶಾಂತಕುಮಾರಿ ಬೆಂಗಳೂರಿಗೆ ಹೋಗಲು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದರು.

ಇನ್ನು ಡಿ.6 ರಂದು ರತ್ನಮ್ಮ ಬೆಂಗಳೂರಿಗೆ ಹೋಗಲು ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ನಗರಠಾಣೆಯ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಸಿ.ಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳಿಯರ ಗುರುತು ಪತ್ತೆ ಮಾಡಿ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಸಿಪಿಐ ಸತ್ಯನಾರಾಯಣ್, ಪಿ.ಎಸ್.ಐ ಚಂದ್ರಕಲಾ, ಸಿಬ್ಬಂದಿ ಶ್ರೀರಾಮಯ್ಯ, ಪುಷ್ಪ, ಶಿವಶೇಖರ, ಮಹಂತೇಶ್, ಗ್ರಾಮಾಂತರ ಠಾಣೆಯ ಸಿಬ್ಬಂದಿ ರಿಜ್ವಾನ್, ಶ್ರೀನಿವಾಸರೆಡ್ಡಿ ಮತ್ತು ಅಶ್ವತ್ಥಪ್ಪ ಕಾರ್ಯಕ್ಷಮತೆಗೆ ಜಿಲ್ಲಾವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago