ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಅತ್ಯಗತ್ಯ- ರಾಘವೇಂದ್ರ

ದೊಡ್ಡಬಳ್ಳಾಪುರ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಧಾನ್ ಫೌಂಡೇಷನ್ ಸಂಸ್ಥೆಯು ದೇಶದ 14 ರಾಜ್ಯಗಳ 15 ಲಕ್ಷ ಮಹಿಳೆಯರ ಜೊತೆ ಕೆಲಸ ಮಾಡುತ್ತಿದೆ ಎಂದು ಧಾನ್ ಫೌಂಡೇಷನ್ ಸಂಸ್ಥೆ ರಾಮನಗರ ವಲಯ ಸಂಯೋಜಕ ರಾಘವೇಂದ್ರ ಹೇಳಿದರು.

ಅವರು ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಧಾನ್ ಫೌಂಡೇಷನ್ ರಾಮಗರ ವಲಯದ ಕಳಂಜಿಯಂ ಮಹಿಳಾ ಒಕ್ಕೂಟಗಳ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಆರ್ಥಿಕ ಸಾಕ್ಷರತೆ ಇಲ್ಲದೆ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿದರು ಸಹ ಪ್ರಗತಿಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಹಣ ವಿನೊಯೋಗದ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಹಾಗೆಯೇ ಸಂಸ್ಥೆಯು ಮಹಿಳಾ ಒಕ್ಕೂಟದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ರೈತರ ಅನುಕೂಲಕ್ಕಾಗಿ ಕೆರೆ ಅಭಿವೃದ್ಧಿ ಸೇರಿದಂತೆ ಜನಪರವಾದ ಕೆಲಸಗಳನ್ನು ಮಾಡುತ್ತಿದೆ ಎಂದರು.

ನಗರದ ಯುನಿಯನ್ ಬ್ಯಾಂಕ್ ವ್ಯವಸ್ಥಾಪಕ ಸಂಜೀವ್ ಕುಮಾರ್ ಮಾತನಾಡಿ, ಬ್ಯಾಂಕ್ ವತಿಯಿಂದ ಮಹಿಳಾ ಒಕ್ಕೂಟಗಳ ಮೂಲಕ ಅವರ ಬೇಡಿಕೆಗೆ ತಕ್ಕಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಳ್ಳುವ ಕಡೆಗೆ ಪ್ರಥಮ ಆದ್ಯತೆ ನೀಡಬೇಕು. ಬ್ಯಾಂಕ್ಗಳು ಸಾಲ ನೀಡುವುದು ಬ್ಯಾಂಕಿನ ಅಭಿವೃದ್ಧಿಗಾಗಿ ಮಾತ್ರವೇ ಅಲ್ಲ, ದೇಶದ ಹಾಗೂ ಪ್ರಜೆಗಳು ಆರ್ಥಿಕವಾಗಿ ಪ್ರಗತಿಹೊಂದುವ ಉದ್ದೇಶ ಹೊಂದಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಇತರರು ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹನುಮಕ್ಕ, ಸರಳಮ್ಮ ಹಾಗೂ ನಿರ್ದೇಶಕರು ಇದ್ದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

8 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

12 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

20 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

22 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago