ಮಹಿಳೆಯರಿಗೆ ಫ್ಯಾಷನ್‌ ಡಿಸೈನಿಂಗ್(ಟೈಲರಿಂಗ್) ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಫ್ಯಾಷನ್‌ ಡಿಸೈನಿಂಗ್(ಟೈಲರಿಂಗ್) ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜುಲೈ 22 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿಯನ್ನು ಗೂಗಲ್‌ ಫಾರ್ಮ್‌ ಲಿಂಕ್‌ https://docs.google.com/forms/d/e/1FAIpQLSd6_EphjQf06zNFLdaapM4JnBLenbByyWtv52n2V1rtlPLLRA/viewform?usp=sf_link ಬಳಸಿ ಸಲ್ಲಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago