ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.
ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್‌ಕುಮಾರ್ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್ ಅಧ್ಯಕ್ಷತೆ ವಹಿಸಿದ್ದರು.
ನಿಯೋಜಿತ ಸಿವಿಲ್ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್‌ಕುಮಾರ್, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್ ಪಟೇಲ್, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್ ಬ್ಯಾಂಕ್ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…