ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್‌ಕುಮಾರ್‌ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್‌ ಅಧ್ಯಕ್ಷತೆ ವಹಿಸಿದ್ದರು.

ನಿಯೋಜಿತ ಸಿವಿಲ್‌ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್‌ಕುಮಾರ್‌, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್‌ ಪಟೇಲ್‌, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್‌ ಬ್ಯಾಂಕ್‌ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago