ಮಹಿಳೆಯರು ಶೌರ್ಯ-ಧೈರ್ಯ ಬೆಳೆಸಿಕೊಳ್ಳಿ- ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ವೀರ ವಿನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ರಕ್ಷಣೆ ಪಣತೊಡಬೇಕು ಎಂದರು.

ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದಾಗ ಮನೆಯಲ್ಲಿದ್ದ ಒನಕೆಯನ್ನೇ ಆಯುಧವನ್ನಾಗಿಸಿ ಎದುರಾಳಿ ಸೈನಿಕರ ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದರು. ಅಂತಹ ವೀರ ವನಿತೆ ಒನಕೆ ಓಬವ್ವ ಅವರ ಕಾಯಕ ನಿಷ್ಠೆ, ಧೈರ್ಯ ನಾಡಿನ ಮಹಿಳೆಯರಿಗೆ ಆದರ್ಶವಾಗಿದೆ. ನಿಜ ಜೀವನದಲ್ಲಿ ಧೈರ್ಯ, ಸಾಹಸವನ್ನು ಮಹಿಳೆಯರು ಅಳವಡಿಸಿಕೊಂಡಲ್ಲಿ ಕರ್ತವ್ಯ ನಿಷ್ಠೆ, ಕಾಯಕ ನಿಷ್ಠೆಯಿಂದ ಧೈರ್ಯವಾಗಿ ಬದುಕಬಹುದು ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಮಾತನಾಡಿ, ಓಬವ್ವ ಅವರ ಧೈರ್ಯ ಹಾಗೂ ಸಾಹಸದಿಂದ ಹತ್ತಾರು ಸೈನಿಕರನ್ನು ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ್ದಕ್ಕಾಗಿ ವೀರವನಿತೆ ಓಬವ್ವ ಎಂದು ಕರೆಯುತ್ತಾರೆ. ಮಹಿಳೆಯರ ಧೈರ್ಯಕ್ಕೆ ಒಂದು ಸ್ಪೂರ್ತಿ ವೀರವನಿತೆ ಓಬವ್ವ, ಎಲ್ಲರು ಅವರು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago